Select Your Language

Notifications

webdunia
webdunia
webdunia
webdunia

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Former Chief Minister BS Yeddyurappa, Subhash-Shravan marriage, Chief Minister Siddaramaiah

Sampriya

ಬೆಂಗಳೂರು , ಭಾನುವಾರ, 8 ಜೂನ್ 2025 (09:42 IST)
Photo Courtesy X
ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್ ಮತ್ತು ಶ್ರಾವಣ ಅವರ ಮದುವೆ ಆರತಕ್ಷತೆ ಶನಿವಾರ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ವಿವಿಧ ಪಕ್ಷಗಳ ನಾಯಕರು, ಗಣ್ಯರು ಪಾಲ್ಗೊಂಡು ನವಜೋಡಿಗೆ ಶುಭಹಾರೈಸಿದರು.

ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಪುತ್ರ ಸುಭಾಷ್ ಮತ್ತು ಶ್ರಾವಣ ಇದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಶನಿವಾರ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಮಾರ್ಚ್ 24ರಂದು ಕಲಬುರಗಿಯಲ್ಲಿ ಸುಭಾಷ್‌- ಶ್ರಾವಣ ಅವರ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಸುಭಾಷ್‌ ಅವರು ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ಇಂದು ವರಿಸಲಿದ್ದಾರೆ. 

ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ, ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪಾಲ್ಗೊಂಡು ನವ ವಧು-ವರರಿಗೆ ಶುಭ ಹಾರೈಸಿದರು.  

ಅಲ್ಲದೆ ಸಚಿವರಾದ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು.  

Share this Story:

Follow Webdunia kannada

ಮುಂದಿನ ಸುದ್ದಿ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ