Webdunia - Bharat's app for daily news and videos

Install App

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Sampriya
ಭಾನುವಾರ, 8 ಜೂನ್ 2025 (09:42 IST)
Photo Courtesy X
ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗ ಸುಭಾಷ್ ಮತ್ತು ಶ್ರಾವಣ ಅವರ ಮದುವೆ ಆರತಕ್ಷತೆ ಶನಿವಾರ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ವಿವಿಧ ಪಕ್ಷಗಳ ನಾಯಕರು, ಗಣ್ಯರು ಪಾಲ್ಗೊಂಡು ನವಜೋಡಿಗೆ ಶುಭಹಾರೈಸಿದರು.

ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಪುತ್ರ ಸುಭಾಷ್ ಮತ್ತು ಶ್ರಾವಣ ಇದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಶನಿವಾರ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಮಾರ್ಚ್ 24ರಂದು ಕಲಬುರಗಿಯಲ್ಲಿ ಸುಭಾಷ್‌- ಶ್ರಾವಣ ಅವರ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಸುಭಾಷ್‌ ಅವರು ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ಇಂದು ವರಿಸಲಿದ್ದಾರೆ. 

ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ, ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪಾಲ್ಗೊಂಡು ನವ ವಧು-ವರರಿಗೆ ಶುಭ ಹಾರೈಸಿದರು.  

ಅಲ್ಲದೆ ಸಚಿವರಾದ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments