ಮೈಸೂರು : ಪತಿಯೊಬ್ಬ ವರದಕ್ಷಿಣೆಗಾಗಿ ತನ್ನ ಪತ್ನಿಯನ್ನೇ ಕೊಲೆಗೈದ ಘಟನೆ ನಗರದ ಜೆ.ಪಿ ನಗರದಲ್ಲಿ ನಡೆದಿದೆ.
ನಂದಿನಿ (25) ಮೃತ ಪತ್ನಿ. ಪತಿ ವಿಜಯ್ (30) ಕೊಲೆ ಆರೋಪಿ. ದಂಪತಿ 2 ವರ್ಷಗಳ ಹಿಂದಷ್ಟೇ ಮದುವೆ ಆಗಿದ್ದರು. ವರದಕ್ಷಿಣೆಗಾಗಿ ವಿಜಯ್ ಹಾಗೂ ಕುಟುಂಬಸ್ಥರು ನಂದಿನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಆರೋಪಿಯು 11 ತಿಂಗಳ ಮಗು ಕೊಲೆಗೂ ಯತ್ನಿಸಿದ್ದಾನೆ ಎಂದು ನಂದಿನಿ ಕುಟುಂಬಸ್ಥರು ಆರೋಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.