Select Your Language

Notifications

webdunia
webdunia
webdunia
webdunia

ಪತ್ನಿಯನ್ನ ಕೊಲೆ ಮಾಡಲು ಯತ್ನಿಸಿದ ಪತಿ

ಮಹಿಳಾ ಪೊಲೀಸ್ ಠಾಣೆ
ಹಾಸನದ ಮಹಿಳಾ ಪೊಲೀಸ್ ಠಾಣೆಗೆಯಲ್ಲೇ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಲು ಯತ್ನಿಸಿದ್ದಾನೆ. ಶಿಲ್ಪ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರೀಶ್ ಕೊಲೆ ಮಾಡಲು ಯತ್ನಿಸಿದ ಪತಿ. ಹರೀಶ್ ಮತ್ತು ಶಿಲ್ಪ ಮದುವೆಯಾಗಿ 6 ವರ್ಷಗಳಾಗಿದ್ದು, ಒಬ್ಬರ ಮೇಲೆ ಒಬ್ಬರು ಅನುಮಾನಪಟ್ಟು ಜಗಳವಾಡಿ ಠಾಣೆಯ ಮೆಟ್ಟಿಲೇರಿದ್ದಾರೆ.

ಗಂಡ ನನಗೆ ಕಿರುಕುಳ ನೀಡುತ್ತಿದ್ದಾನೆಂದು ಶಿಲ್ಪ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಹರೀಶ್​ನನ್ನು ಕರೆಸಿ ವಿಚಾರಣೆ ನಡೆಸುತ್ತಿರುವಾಗ, ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೆ ಪೊಲೀಸರು ತಡೆದಿದ್ದು, ಚಾಕು ಕಿತ್ತುಕೊಂಡು ಆರೋಪಿ ಹರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿನಲ್ಲಿ ಪೊಲೀಸ್​​​ ಪೇದೆ ಹಲ್ಲೆ;16 ಮಂದಿ ಮೇಲೆ FIR