ಬನ್ನೇರುಘಟ್ಟ ಸಫಾರಿ ವೇಳೆ ಬಸ್‌ ಏರಿದ ಚಿರತೆ

Sampriya
ಸೋಮವಾರ, 7 ಅಕ್ಟೋಬರ್ 2024 (17:38 IST)
Photo Courtesy X
ಬೆಂಗಳೂರು: ಸಫಾರಿ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಎಗರಿರುವ ಘಟನೆ ಭಾನುವಾರ ಆನೇಕಲ್ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ.

ಹತ್ತಿರದಲ್ಲಿ ಚಿರತೆಯನ್ನು ನೋಡಲು ಸಫಾರಿ ವಾಹನವನ್ನು ನಿಲ್ಲಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಚಿರತೆ ಏಕಾಏಕಿ ವಾಹನದ ಕಿಟಕಿಯನ್ನು ಹಿಡಿದು ದಾಳಿ ಮಾಡಲು ಯತ್ನಿಸಿದೆ. ವಾಹನದಲ್ಲಿದ್ದ ಕೆಲ ಪ್ರವಾಸಿಗರಿಗೆ ಆತಂಕವಾಗಿದ್ದು, ಮತ್ತೇ ಕೆಲವರು ಚಿರತೆಯನ್ನು ಹತ್ತಿರ ನೋಡಿ ಖುಷಿ ಪಟ್ಟಿದ್ದಾರೆ.

ಚಿರತೆ ಸಫಾರಿ ವಾಹನದ ಮೇಲೆ ದಾಳಿ ಮಾಡುತ್ತಿರುವುದನ್ನು ಹಿಂದಿನ ವಾಹನದಲ್ಲಿದ್ದ ಪ್ರವಾಸಿಗರು ಸೆರೆ ಹಿಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ.
ಅದೇ ರೀತಿ ಇಂದು ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಘರ್ಜಿಸಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments