ಬೆಂಗಳೂರು: ಸ್ವಿಮ್ಮಿಂಗ್ ಫೂಲ್‌ನಲ್ಲಿ ಕಾಲಹರಣ ಮಾಡುವ ಅಸಮರ್ಥ ಅನಾರೋಗ್ಯ ಸಚಿವರಿಂದ ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧೀನದ ಆಸ್ಪತ್ರೆಗಳಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಶುಲ್ಕ, ಪ್ರಮಾಣಪತ್ರ ನೀಡುವ ದರವನ್ನು ತುಘಲಕ್ ಸಿದ್ದರಾಮಯ್ಯ ಸರ್ಕಾರವು ಶೇಕಡ 20 ರಷ್ಟು ಹೆಚ್ಚಿಸಿದೆ. ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಹ ಶುಲ್ಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಬಡವರಿಗೆ ಸಂಜೀವಿನಿಯಾಗಿರುವ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳದ ಬರೆ !
ಸ್ವಿಮ್ಮಿಂಗ್ ಫೂಲ್‌ನಲ್ಲಿ ಕಾಲಹರಣ ಮಾಡುವ ಅಸಮರ್ಥ ಅನಾರೋಗ್ಯ ಸಚಿವರಿಂದ ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಶಾಪವಾಗಿ ಪರಿಣಮಿಸುತ್ತಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧೀನದ ಆಸ್ಪತ್ರೆಗಳಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಶುಲ್ಕ, ಪ್ರಮಾಣಪತ್ರ ನೀಡುವ ದರವನ್ನು ತುಘಲಕ್ ಸಿದ್ದರಾಮಯ್ಯ ಸರ್ಕಾರವು ಶೇಕಡ 20 ರಷ್ಟು ಹೆಚ್ಚಿಸಿದೆ. ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಹ ಶುಲ್ಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಲ್ಲ, ವೈದ್ಯರ-ದಾದಿಯರ ಕೊರತೆ, ಜೀವ ರಕ್ಷಕ ಔಷಧಿಗಳ ಕೊರತೆ, ಇದೀಗ ಚಿಕಿತ್ಸೆ ದರ ಏರಿಕೆ ಮಾಡಿ ಶಾಕ್ ನೀಡಿದ್ದಾರೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಾಗಿ ಬೊಕ್ಕಸ ಖಾಲಿ ಮಾಡಿ, ಇದೀಗ ಹಣ ಸರಿದೂಗಿಸಲು ಕಾಂಗ್ರೆಸ್ ಸರ್ಕಾರ ಬಡ ಜನರ ಜೀವದ ಜೊತೆ ಜೂಟಾಟ ಆಡುತ್ತಿದೆ.
ಅನಾರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇನ್ನಾದರೂ ಈಜುಕೊಳದಿಂದ ಎದ್ದು ಬಂದು ಬಡ ರೋಗಿಗಳ ಭಾವನೆಗೆ ಸ್ಪಂದಿಸಬೇಕು.