ಬಡವರಿಗೆ ಸಂಜೀವಿನಿಯಾಗಿರುವ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳದ ಬರೆ

Sampriya
ಬುಧವಾರ, 20 ನವೆಂಬರ್ 2024 (17:45 IST)
ಬೆಂಗಳೂರು: ಸ್ವಿಮ್ಮಿಂಗ್ ಫೂಲ್‌ನಲ್ಲಿ ಕಾಲಹರಣ ಮಾಡುವ ಅಸಮರ್ಥ ಅನಾರೋಗ್ಯ ಸಚಿವರಿಂದ ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ.

ಬೆಂಗಳೂರು  ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧೀನದ ಆಸ್ಪತ್ರೆಗಳಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಶುಲ್ಕ, ಪ್ರಮಾಣಪತ್ರ ನೀಡುವ ದರವನ್ನು ತುಘಲಕ್ ಸಿದ್ದರಾಮಯ್ಯ ಸರ್ಕಾರವು ಶೇಕಡ 20 ರಷ್ಟು ಹೆಚ್ಚಿಸಿದೆ. ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಹ ಶುಲ್ಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬಡವರಿಗೆ ಸಂಜೀವಿನಿಯಾಗಿರುವ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳದ ಬರೆ !

ಸ್ವಿಮ್ಮಿಂಗ್ ಫೂಲ್‌ನಲ್ಲಿ ಕಾಲಹರಣ ಮಾಡುವ ಅಸಮರ್ಥ ಅನಾರೋಗ್ಯ ಸಚಿವರಿಂದ ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಶಾಪವಾಗಿ ಪರಿಣಮಿಸುತ್ತಿದೆ.

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧೀನದ ಆಸ್ಪತ್ರೆಗಳಲ್ಲಿ ರೋಗಿಗಳ ದಾಖಲಾತಿ, ಚಿಕಿತ್ಸೆ ಶುಲ್ಕ, ಪ್ರಮಾಣಪತ್ರ ನೀಡುವ ದರವನ್ನು ತುಘಲಕ್ ಸಿದ್ದರಾಮಯ್ಯ ಸರ್ಕಾರವು ಶೇಕಡ 20 ರಷ್ಟು ಹೆಚ್ಚಿಸಿದೆ. ಆರೋಗ್ಯ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸಹ ಶುಲ್ಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಲ್ಲ, ವೈದ್ಯರ-ದಾದಿಯರ ಕೊರತೆ, ಜೀವ ರಕ್ಷಕ ಔಷಧಿಗಳ ಕೊರತೆ, ಇದೀಗ ಚಿಕಿತ್ಸೆ ದರ ಏರಿಕೆ ಮಾಡಿ ಶಾಕ್ ನೀಡಿದ್ದಾರೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಾಗಿ ಬೊಕ್ಕಸ ಖಾಲಿ ಮಾಡಿ, ಇದೀಗ ಹಣ ಸರಿದೂಗಿಸಲು ಕಾಂಗ್ರೆಸ್ ಸರ್ಕಾರ ಬಡ ಜನರ ಜೀವದ ಜೊತೆ ಜೂಟಾಟ ಆಡುತ್ತಿದೆ.

ಅನಾರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಅವರು ಇನ್ನಾದರೂ ಈಜುಕೊಳದಿಂದ ಎದ್ದು ಬಂದು ಬಡ ರೋಗಿಗಳ ಭಾವನೆಗೆ ಸ್ಪಂದಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments