ಚಿತ್ರದುರ್ಗ : ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ನಲ್ಲಿ ನಡೆದಿದೆ.
ರಾತ್ರಿ ಹಾಸ್ಟೆಲ್ನಲ್ಲಿ ಅನ್ನ – ಸಾಂಬಾರ್ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಟ್ಟು 35 ವಿದ್ಯಾರ್ಥಿಗಳು ರಾತ್ರಿ ಊಟ ಮಾಡಿದ್ದರು. ಅವರಲ್ಲಿ 13 ಮಂದಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿ ತಲುಪಿದ್ದಾರೆ. ಅವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.