ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

Sampriya
ಸೋಮವಾರ, 30 ಜೂನ್ 2025 (16:40 IST)
ಬೆಂಗಳೂರು: ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆಯಾದ ಶವದ ಪ್ರಕರಣ ಸಂಬಂಧ ಮೃತಳ ಗುರುತು ಪತ್ತೆಯಾಗಿದ್ದು, ಪ್ರಿಯಕರನೆ ಕೊಂದು ಕಸದ ಲಾರಿಗೆ ಹಾಕಿರುವುದು ತನಿಖೆಯಲ್ಲಿ ತಿಳಿದುಬಂದಿದೆ. 

ಮೃತಳನ್ನು ಬೆಂಗಳೂರಿನ ಹುಳಿಮಾವು ನಿವಾಸಿ ಆಶಾ ಎಂದು ತಿಳಿದುಬಂದಿದೆ. ಇನ್ನು ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಆಶಾಳನ್ನು ಆಕೆಯ ಪ್ರಿಯತಮ ಶಂಶುದ್ದೀನ್ ಕೊಲೆ ಮಾಡಿ ಶವವನ್ನು ಕಸದ ಲಾರಿಗೆ ಎಸಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಭಾನುವಾರ ಬಿಬಿಎಂಪಿ ಕಸದ ಲಾರಿಯಲ್ಲಿದ್ದ ಚೀಲದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮಹಿಳೆಯ ಕೈಗಳನ್ನು ಕಟ್ಟಿಹಾಕಲಾಗಿತ್ತು. ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ, ತನಿಖೆ ಆರಂಭಿಸಿದ್ದರು. 

ಸಾಕ್ಷ್ಯಗಳನ್ನು ಕಲೆಹಾಕಿದಾಗ ಆಶಾ ಜತೆಗಿದ್ದ ಅಸ್ಸಾಂ ಮೂಲದ 33ವರ್ಷದ ಮೊಹಮ್ಮದ್ ಶಂಶುದ್ದೀನ್ ಎಂಬಾತನೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಸದ್ಯ ಅತನನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

‌ತನಿಖೆ ವೇಳೆ ಇಬ್ಬರಿಗೂ ಪ್ರತ್ಯೇಕ ಮದುವೆಯಾಗಿದೆ. ಆಶಾ ವಿಧವೆಯಾಗಿದ್ದು, ಆಕೆ ಹುಳಿಮಾವಿನಲ್ಲಿ ಬಾಡಿಗೆ ಮನೆಯಲ್ಲಿ ಶಂಶುದ್ದೀನ್ ಜತೆ ವಾಸಿಸುತ್ತಿದ್ದಳು. ಇವರಿಬ್ಬರು ಗಂಡ ಹೆಂಡತಿ ಎಂದು ಸ್ಥಳೀಯರು ಭಾವಿಸಿದ್ದರು. 

ಇಬ್ಬರಿಗೂ ಬೇರೆ ಬೇರೆ ಮದುವೆಯಾಗಿದೆ. ಆಶಾ ವಿಧವೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಮನೆ ಕೆಲಸ ಮಾಡುತ್ತಿದ್ದರು. ಮೊಹಮ್ಮದ್ ಶಂಶುದ್ದೀನ್‌ ಕೂಡಾ ಮದುವೆಯಾಗಿದ್ದು, ಆತನ ಹೆಂಡತಿ ಮತ್ತು ಮಕ್ಕಳು ಅಸ್ಸಾಂನಲ್ಲಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments