ಸಾಲಗಾರರ ಬೆದರಿಕೆಯಿಂದ ರೊಚ್ಚಿಗೆದ್ದ ವ್ಯಕ್ತಿಯೊಬ್ಬ ಸಾಲ ನೀಡಿದವನ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಭೀಕರ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ದೇವನಹಳ್ಳಿ ಸಮೀಪದ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟಣೆ ಜರುಗಿದ್ದು, ಸಾಲಗಾರ ಶಶಿ ಕುಮಾರ್ ಎಂಬಾತ ಸಾಲ ನೀಡಿದ್ದ ಮಂಜುನಾಥ್ ಎನ್ನುವ ವ್ಯಕ್ತಿಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದು ಶರಣಾಗಿದ್ದಾನೆ.
ಶಶಿಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ವಿಶ್ವನಾಥಪುರ ಠಾಣಾ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಕೊಲೆಯಾದ ಮಂಜುನಾಥ್ ಎಂಬ ವ್ಯಕ್ತಿಯಿಂದ ಸುಮಾರು 27 ಸಾವಿರ ರೂಪಾಯಿ ಸಾಲ ಪಡೆದಿದ್ದು, ಸಾಲದ ಹಣವನ್ನು ವಾಪಸ್ ನೀಡುವಂತೆ ಮಂಜುನಾಥ್ ಹಾಗೂ ಆತನ ಸ್ನೇಹಿತರು ಧಮ್ಕಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಮಂಜುನಾಥ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ