Publish Date: Wed, 11 Jan 2023 (19:44 IST)
Updated Date: Wed, 11 Jan 2023 (20:06 IST)
ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. K.R ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯಾಗಿರುವ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ದ. ಜೊತೆಗೆ ಈತ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದನು.
ನಿನ್ನೆ ಆತ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯೂ, ಕೊಲೆಯೋ ತಿಳಿದು ಬಂದಿಲ್ಲ. ಇನ್ನು ಈ ಕುರಿತು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.