Publish Date: Fri, 24 Feb 2023 (15:14 IST)
Updated Date: Fri, 24 Feb 2023 (15:16 IST)
ಕಾರ್ಪೆಂಟರ್ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಕಾರ್ಪೆಂಟರ್ ದಿನೇಶ್ ಹತ್ಯೆ ಮಾಡಲಾಗಿದೆ. ಜ್ಞಾನಭಾರತಿ ವ್ಯಾಪ್ತಿಯ ಮಂಗನಹಳ್ಳಿ ನಿವಾಸಿ ದಿನೇಶ್, ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಲಾಂಗ್ನಿಂದ ದಿನೇಶ್ ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಬಳಿಕ ಪಕ್ಕದ ಖಾಲಿ ಜಾಗದಲ್ಲಿ ಲಾಂಗ್ ಎಸೆದಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಫಿಂಗರ್ ಪ್ರಿಂಟ್ಸ್ ತಜ್ಞರು ಭೇಟಿ ನೀಡಿದ್ದಾರೆ.