Select Your Language

Notifications

webdunia
webdunia
webdunia
webdunia

ಕೊರೊನಾಕ್ಕೆ ಹೆದರಿದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

webdunia
ಶನಿವಾರ, 18 ಜುಲೈ 2020 (16:40 IST)
ತನಗೆ ಡೆಡ್ಲಿ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದ ಹಿರಿಯ ಜೀವಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಾಮನಗರ ಆರ್‌ಟಿಒ ಕಚೇರಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.  

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ 60 ವರ್ಷದ ವ್ಯಕ್ತಿ ತನಗೆ ಕೊರೊನಾ ಸೋಂಕು ಇದೆ ಎಂದು ತಿಳಿದು ತಡರಾತ್ರಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಧಿಕಾರಿಗಳಿಗೂ ಸೋಂಕು ವ್ಯಾಪಿಸುತ್ತಿದೆ.

ಕಳೆದ ವಾರವಷ್ಟೇ ಇಲ್ಲಿನ ಆರ್‌ಟಿಒ ಇನ್ಸ್‌ಪೆಕ್ಟರ್ ಅವರಿಗೆ ಸೋಂಕು ದೃಢಪಟ್ಟಿತ್ತು.  ಅಧಿಕಾರಿ, ಏಜೆಂಟ್ ಹಾಗೂ ಸಿಬ್ಬಂದಿಗೆ ಸೋಂಕು ತಗುಲಿದ್ದರಿಂದ ಕಚೇರಿಯನ್ನು ಸ್ಯಾನಿಟೈಸರ್ ಮಾಡಿ ಸೀಲ್‌ಡೌನ್ ಮಾಡಲಾಗಿದೆ.Share this Story:

Follow Webdunia Hindi

ಮುಂದಿನ ಸುದ್ದಿ

ತನ್ನ ಅಕ್ರಮ ಸಂಬಂಧಕ್ಕೆ ಗಂಡನ ಜೀವ ತೆಗೆದ ಪತ್ನಿ