Select Your Language

Notifications

webdunia
webdunia
webdunia
Sunday, 6 April 2025
webdunia

ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿ ಜೀವ ಕಳೆದುಕೊಂಡ ವ್ಯಕ್ತಿ

ಕಲಬುರಗಿ
ಕಲಬುರಗಿ , ಶನಿವಾರ, 25 ಜುಲೈ 2020 (11:40 IST)
Normal 0 false false false EN-US X-NONE X-NONE

ಕಲಬುರಗಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ ಹಿನ್ನಲೆಯಲ್ಲಿ ವಿವಾಹಿತ ವ್ಯಕ್ತಿಯೊಬ್ಬನನ್ನು ಮಹಿಳೆಯ ಸಂಬಂಧಕರು ಕೊಲೆ ಮಾಡಿದ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ಶಹಬಾದ್ ನಲ್ಲಿ ನಡೆದಿದೆ.

ಜಗದೀಶ್ (32) ಕೊಲೆಯಾದ ವ್ಯಕ್ತಿ. ಈತನಿಗೆ ಮದುವೆಯಾಗಿದ್ದರೂ ಕೂಡ ವಿವಾಹಿತ ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ.  ಶುಕ್ರವಾರ ರಾತ್ರಿ ಈತ ಮಹಿಳೆಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಮಹಿಳೆಯ ಸಂಬಂಧಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆಗ ಅವರು ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಈ ಹಿನ್ನಲೆಯಲ್ಲಿ ತೀವ್ರವಾಗಿ ಗಾಯಗೊಂಡ ಜಗದೀಶ್ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಈ ಬಗ್ಗೆ ಶಹಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಮೊದಲು ಹುತಾತ್ಮರಾದ ಯೋಧನ ಸ್ಮರಣಾರ್ಥವಾಗಿ ಸ್ಥಾಪನೆಯಾಯ್ತು ವೀರಗಲ್ಲು