Publish Date: Sat, 15 Feb 2020 (10:41 IST)
Updated Date: Sat, 15 Feb 2020 (10:51 IST)
ಬೆಂಗಳೂರು : ಇಂದು ಸಿಎಂ ಬಿಎಸ್ ವೈ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಿಎಂ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇಂದು ಸರ್ಕಾರದ ಕಾರ್ಯವೈಕರ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇಂದು ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಪ್ರತಿಭಟನೆಯ ವೇಳೆ ಸಿಎಂ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವ ಕಾರಣ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸಿಎಂ ಬಿಎಸ್ ವೈ ಅವರ ಧವಳಗಿರಿ ನಿವಾಸ ಹಾಗೂ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.