Select Your Language

Notifications

webdunia
webdunia
webdunia
webdunia

ಏಪ್ರಿಲ್ 1ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ

meeting of senior leaders
bangalore , ಮಂಗಳವಾರ, 29 ಮಾರ್ಚ್ 2022 (16:11 IST)
ಏಪ್ರಿಲ್ 1ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆಯಲಿದೆ. ಸಭೆ ಬಳಿಕ ಸದಸ್ಯತ್ವ ನೋಂದಣಿ ವಿಚಾರವಾಗಿ ಜೂಮ್ ಮೀಟಿಂಗ್ ನಡೆಯಲಿದ್ದು, ಸಮಯಾವಕಾಶವಿದ್ದರೆ ಹಿರಿಯ ನಾಯಕರ ಜತೆ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಮಾರ್ಚ್ 31ರಂದು ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ರಾಹುಲ್ ಗಾಂಧಿ ತುಮಕೂರಿಗೆ ಭೇಟಿ ನೀಡಲಿದ್ದು, ಸಿದ್ದಗಂಗಾ ಮಠದಲ್ಲಿರುವ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಅಲ್ಲಿಯೇ ಪ್ರಸಾದ ಸ್ವೀಕರಿಸಿ, ನಂತರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ನಾಯಕರೂ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು

Share this Story:

Follow Webdunia kannada

ಮುಂದಿನ ಸುದ್ದಿ

ಇಂದು SRH V/S RR ಸೆಣಸಾಟ