Select Your Language

Notifications

webdunia
webdunia
webdunia
webdunia

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ
bangalore , ಶುಕ್ರವಾರ, 16 ಜೂನ್ 2023 (20:23 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಮಾರ್ಕ್ ಮಾಡಿದ್ದು, ತಹಶೀಲ್ದಾರ್ ರವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿಗಳನ್ನು ತ್ವರಿತಗತಿಯಲ್ಲಿ  ತೆರವು ಕಾರ್ಯಾಚರಣೆ ನಡೆಸಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
 
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ  ಒತ್ತುವರಿ ಮಾಡಿಕೊಂಡಿರುವವರಿಗೆ ಬಾಕಿ ಆರ್ಡರ್ ಪಾಸ್ ಮಾಡಬೇಕಿರುವಂತಹ ಸರ್ವೇಗಳಿಗೆ ತಹಶೀಲ್ದಾರ್ ಗಳು ಆರ್ಡರ್ ಪಾಸ್ ಮಾಡಬೇಕು. ತದನಂತರ ಹಂತ-ಹಂತವಾಗಿ ಎಲ್ಲಾ ಒತ್ತುವರಿಗಳ ತೆರವು ಮಾಡಬೇಕು. ಯಾರಾದರು ತಡೆಯೊಡ್ಡಿದರೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಭೂ ಮಾಪನ ಕಾರ್ಯ ಮಾಡಿರುವ ಕಡೆ ಗ್ರಾಮ ನಕ್ಷೆ ಮತ್ತು ಟಿಪ್ಪಣಿಗಳ ಅನ್ವಯ ಯಾವುದೇ ವ್ಯತ್ಯಾಸ ಮಾಡದೆ ಸಂಬಂಧಪಟ್ಟ ಭೂ ಮಾಪಕರು ನಕ್ಷೆಯನ್ನು ಸಿದ್ಧಪಡಿಸಿ ತಹಶೀಲ್ದಾರ್ ರವರು ಅದಕ್ಕೆ ಆದೇಶಗಳನ್ನು ಜಾರಿಮಾಡಬೇಕು. ತದನಂತರ ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಪಾಲಿಕೆಯ ಎಂಟೂ ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತೆರವುಮಾಡಿ ಮಳೆ ನೀರುಗಾಲುವೆಗಳನ್ನು ನಿರ್ಮಾಣ ಮಾಡಿ ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ನಿಗಧಿತ ಸಮಯದಲ್ಲಿ ಇತ್ಯರ್ಥಪಡಿಸಿಕೊಂಡು ಒತ್ತುವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಸಭೆಯಲ್ಲಿ ವಲಯ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ,  ರವೀಂದ್ರ, ಡಾ. ಹರೀಶ್ ಕುಮಾರ್ , ಡಾ. ದೀಪಕ್, ಶ್ರೀಮತಿ ಪ್ರೀತಿ ಗೆಹ್ಲೋಟ್, ಎಲ್ಲಾ ವಲಯ ಜಂಟಿ ಆಯುಕ್ತರು, ಎಲ್ಲಾ ವಲಯ ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರ್ ಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಜಮೀನು ವಿಚಾರವಾಗಿ 2 ಕುಟುಂಬಗಳ ಗಲಾಟೆ