Select Your Language

Notifications

webdunia
webdunia
webdunia
webdunia

ಸರಣಿ ಬಾಣಂತಿಯರ ಸಾವು ಪ್ರಕರಣ ಬೆನ್ನಲ್ಲೇ ರಿಮ್ಸ್ ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು

Rimes Hospital Maternal Case, Karnataka Maternal Case, Chief Minister Siddaramaiah

Sampriya

ರಾಯಚೂರು , ಬುಧವಾರ, 1 ಜನವರಿ 2025 (18:15 IST)
Photo Courtesy X
ರಾಯಚೂರು: ಸರಣಿ ಬಾಣಂತಿಯರ ಸಾವು ಪ್ರಕರಣ ಬೆನ್ನಲ್ಲೇ ರಾಯಚೂರಿನಲ್ಲಿ ಬಾಣಂತಿ ಹಾಗೂ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಗು ಸಾವನ್ನಪ್ಪಿದ ಎರಡು ಗಂಟೆಗಳ ಬಳಿಕ ತಾಯಿ ಸಾವನ್ನಪ್ಪಿದ್ದಾಳೆ. ಬಾಣಂತಿ ಹಾಗೂ ಮಗುವಿನ ಸಾವಿನಿಂದ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದು ಕಳೆದ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 11ನೇ ಬಾಣಂತಿ ಸಾವು ಇದಾಗಿದೆ. ಬಾಣಂತಿ ಸಾವಿಗೆ ಅಧಿಕ ರಕ್ತದೊತ್ತಡ ಹಾಗೂ ಆರೋಗ್ಯದಲ್ಲಾದ ಏರುಪೇರು ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಡಿ.27 ರಂದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಇಂದು (ಜ.01) ಫಲಕಾರಿಯಾಗದೇ ತಾಯಿ ಹಾಗೂ ಮಗು ಇಬ್ಬರು ಸಾವನ್ನಪ್ಪಿದ್ದಾರೆ. ಸಿಸೇರಿಯನ್ ಹೆರಿಗೆ ಬಳಿಕ ರಕ್ತಸ್ರಾವ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾಳೆ. ಜೊತೆಗೆ ಹುಟ್ಟಿದಾಗಿನಿಂದಲೂ ಇನ್ಫೆಕ್ಷನ್‌ಗೆ ಒಳಗಾಗಿದ್ದ ಶಿಶು ಕೂಡ ಕೊನೆಯುಸಿರೆಳೆದಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಕೌಟುಂಬಿಕ ಕಲಹಕ್ಕೆ ತಾಯಿ ಸೇರಿದಂತೆ ನಾಲ್ವರು ಸಹೋದಿಯರನ್ನು ಕೊಂದ ಸಹೋದರ