Publish Date: Thu, 13 Dec 2018 (15:06 IST)
Updated Date: Thu, 13 Dec 2018 (15:08 IST)
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಭಸ್ಮವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ರಾಜಾಪುರ ಬಳಿ ನಡೆದ ಘಟನೆ ಇದಾಗಿದೆ.
ಎರಿಟಿಗಾ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಇಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿ ದ್ದವರು ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾದರು. ಮಧು ಎಂಬುವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ.
ಬೆಂಗಳೂರು ಕಡೆಯಿಂದ ಮಂಡ್ಯ ಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.