Select Your Language

Notifications

webdunia
webdunia
webdunia
webdunia

ಮರ್ಮಾಂಗಕ್ಕೆ ಒದ್ದು ದಲಿತ ಯುವಕನನ್ನು ಹತ್ಯೆ ಮಾಡಿದ ಮುಸ್ಲಿಂ ಯುವಕ

Murder In Yadagiri

Sampriya

ಯಾದಗಿರಿ , ಸೋಮವಾರ, 22 ಏಪ್ರಿಲ್ 2024 (16:14 IST)
ಯಾದಗಿರಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ನಿನ್ನೆ ತಡರಾತ್ರಿ ಮುಸ್ಲಿಂ ಯುವಕನೊಬ್ಬ ದಲಿತ ಯುವಕನ ಹತ್ಯೆ ಮಾಡಿರುವ ಘಟನೆ ಯಾದಗಿರಿಯ ಶಗಾಪುರಪೇಟೆ ಟೆ ಬಡಾವಣೆಯಲ್ಲಿ  ನಡೆದಿದೆ.

ಮೃತ ಯುವಕನನ್ನು ರಾಕೇಶ್ (22) ಎಂದು ಗುರುತಿಸಲಾಗಿದೆ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಕೃತ್ಯ ಎಸಗಿದ್ದಾರೆ.

ನಿನ್ನೆ ರಾತ್ರಿ ರೊಟ್ಟೆ ಕೇಂದ್ರಕ್ಕೆ ರೊಟ್ಟಿ ತರಲು ರಾಕೇಶ್ ಹೋಗಿದ್ದ. ಇದೇ ವೇಳೆ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಗಲಾಟೆಯಾಗಿದೆ. ರಾಕೇಶ್ ಮನೆಗೆ ಮರಳಿದ ನಂತರವೂ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ರಾಕೇಶ್​ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ.

ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್​ಪಿ ಸಂಗೀತಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದ ನಂತರ ರಾಕೇಶ್ ಶವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯಾದಗಿರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ಡೀಪ್ ಫೇಕ್ ವಿಡಿಯೋ: ದೂರು ನೀಡಿದ ನಟ ರಣವೀರ್