ಮರ್ಮಾಂಗಕ್ಕೆ ಒದ್ದು ದಲಿತ ಯುವಕನನ್ನು ಹತ್ಯೆ ಮಾಡಿದ ಮುಸ್ಲಿಂ ಯುವಕ

Sampriya
ಸೋಮವಾರ, 22 ಏಪ್ರಿಲ್ 2024 (16:14 IST)
ಯಾದಗಿರಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ನಿನ್ನೆ ತಡರಾತ್ರಿ ಮುಸ್ಲಿಂ ಯುವಕನೊಬ್ಬ ದಲಿತ ಯುವಕನ ಹತ್ಯೆ ಮಾಡಿರುವ ಘಟನೆ ಯಾದಗಿರಿಯ ಶಗಾಪುರಪೇಟೆ ಟೆ ಬಡಾವಣೆಯಲ್ಲಿ  ನಡೆದಿದೆ.

ಮೃತ ಯುವಕನನ್ನು ರಾಕೇಶ್ (22) ಎಂದು ಗುರುತಿಸಲಾಗಿದೆ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಕೃತ್ಯ ಎಸಗಿದ್ದಾರೆ.

ನಿನ್ನೆ ರಾತ್ರಿ ರೊಟ್ಟೆ ಕೇಂದ್ರಕ್ಕೆ ರೊಟ್ಟಿ ತರಲು ರಾಕೇಶ್ ಹೋಗಿದ್ದ. ಇದೇ ವೇಳೆ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಗಲಾಟೆಯಾಗಿದೆ. ರಾಕೇಶ್ ಮನೆಗೆ ಮರಳಿದ ನಂತರವೂ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ರಾಕೇಶ್​ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ.

ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್​ಪಿ ಸಂಗೀತಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದ ನಂತರ ರಾಕೇಶ್ ಶವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯಾದಗಿರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments