Select Your Language

Notifications

webdunia
webdunia
webdunia
webdunia

ರೈಲಿನಿಂದ ಬಿದ್ದು ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಸಾವು

National-level kabaddi player Death

Sampriya

ಪುತ್ತೂರು , ಮಂಗಳವಾರ, 10 ಫೆಬ್ರವರಿ 2026 (17:07 IST)
ಪುತ್ತೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು 25ರ ಹರೆಯದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ಮುಂಜಾನೆ ಚನ್ನರಾಯಪಟ್ಟಣ ಬಳಿ ನಡೆದಿದೆ.

ಮೃತರನ್ನು ಪುಣಚ ನಿವಾಸಿ ನಿಶಿತ್ ನಾಯ್ಕ್ ಎಂದು ಗುರುತಿಸಲಾಗಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಅವರು ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

ನಿಶಿತ್ ಸೋಮವಾರ ರಾತ್ರಿ ಬೆಂಗಳೂರಿನಿಂದ ತನ್ನ ಊರಿಗೆ ತೆರಳಲು ರೈಲಿನಲ್ಲಿ ತೆರಳಿದ್ದರು. ಮೂಲಗಳ ಪ್ರಕಾರ, ಅವರು ಜನರಲ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ 2:30ರ ಸುಮಾರಿಗೆ ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆಯಲ್ಪಟ್ಟಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಮೃತದೇಹವನ್ನು ಹಾಸನ ರೈಲ್ವೆ ಪೊಲೀಸರ ವಶದಲ್ಲಿ ಇರಿಸಲಾಗಿದೆ. ನಿಶಿತ್ ಅವರ ತಂದೆ ನಿವೃತ್ತ ಸೈನಿಕ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸಂಸದರ ನಡೆ ತೀವ್ರ ವಿರೋಧಾಭಾಸವಾಗಿದೆ: ಪ್ರಹ್ಲಾದ್ ಜೋಶಿ