Publish Date: Tue, 28 Nov 2023 (16:20 IST)
Updated Date: Tue, 28 Nov 2023 (17:33 IST)
ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಅಕ್ಟೋಬರ್ 15ರಂದು ಅನುಮಾನದ ಮೇಲೆ ಪೊಲೀಸರು ವಾಹನ ತಪಾಸಣೆ ಮಾಡಿದ್ದರು.
ಬಳಿಕ ವಾಹನ ಚೇಸ್ ಮಾಡಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ವೈದ್ಯರು, ಮೂವರು ಲ್ಯಾಬ್ ಟೆಕ್ನಿಷಿಯನ್ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದರು.