ದಾರಿ ಹೋಕರನ್ನು ಅಡ್ಡಗಟ್ಟಿ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ

Webdunia
ಭಾನುವಾರ, 26 ಸೆಪ್ಟಂಬರ್ 2021 (21:49 IST)
ದಾರಿ ಹೋಕರನ್ನು ಅಡ್ಡಗಟ್ಟಿ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಹಾಗೂ ಆತನ ಮೂವರು ಸಹಚರರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರು ಆರೋಪಿಗಳಿಂದ ಒಂದು ರಿವಾಲ್ವರ್ ಮತ್ತು 6 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಕುಖ್ಯಾತ ರೌಡಿ ಶೀಟರ್ ಹರೀಶ್ ಹಾಗೂ ಆತನ ಮೂವರು ಸಹಚರರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
ಶನಿವಾರ ತಡರಾತ್ರಿ  ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಉಪನಗರದ ವಿಶ್ವೇಶ್ವರ ಲೇಔಟ್‍ನ ಕುವೆಂಪು ಸರ್ಕಾರಿ ಶಾಲೆ ಕಾಂಪೌಂಡ್ ಬಳಿ ಸಾರ್ವಜನಿಕರ ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ಜ್ಞಾನಭಾರತಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ದಸ್ತಗಿರಿ ಆಗಿರುವ ಕುಖ್ಯಾತ ರೌಡಿಶೀಟರ್ ಹರೀಶ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments