Publish Date: Sat, 03 Nov 2018 (15:10 IST)
Updated Date: Sat, 03 Nov 2018 (15:11 IST)
ಬೆಂಗಳೂರು : ವಿದ್ಯಾರ್ಥಿನಿಯರು ಬಸ್ ನಲ್ಲಿ ಪ್ರಯಾಣಿಸುವಾಗ ಅನೇಕ ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರೆ. ಅದರಲ್ಲೂ ಬಸ್ಸಿನಲ್ಲಿ ಹುಡುಗರಿಗಿಂತ ಮಧ್ಯ ವಯಸ್ಸಿನ ವ್ಯಕ್ತಿಗಳೇ ಹೆಚ್ಚು ಇಂತಹ ನೀಚ ಕೃತ್ಯಕ್ಕೆ ಎಸಗುತ್ತಾರೆ. ಅಂತಹದೊಂದು ಘಟನೆ ಇದೀಗ ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಡೆದಿದೆ.
ಬೆಂಗಳೂರಿನಿಂದ ಹಾಸನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನಿದ್ದೆಗೆ ಜಾರಿದ ವೇಳೆ ಪಕ್ಕದಲ್ಲಿ ಕುಳಿತ ಮುದುಕನೊಬ್ಬ ವಿದ್ಯಾರ್ಥಿನಿಯ ದೇಹದ ಖಾಸಗಿ ಭಾಗವನ್ನು ಮುಟ್ಟಿದ್ದಾನೆ ಎನ್ನಲಾಗಿದೆ.
ಈ ರೀತಿ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುದುಕನ ಚಪಲಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ದೃಶ್ಯ ವೈರಲ್ ಆಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.