Select Your Language

Notifications

webdunia
webdunia
webdunia
Monday, 14 April 2025
webdunia

ಮಹಾಕುಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

MahakumbhMela 2025

Sampriya

ಬೆಳಗಾವಿ , ಗುರುವಾರ, 30 ಜನವರಿ 2025 (18:08 IST)
Photo Courtesy X
ಬೆಳಗಾವಿ: 2025ರ ಪ್ರಯಾಗರಾಜ್‌ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಠಾರ (61)  ಎಂದು ಗುರುತಿಸಲಾಗಿದೆ.

ಪ್ರಯಾಗ್‌ರಾಜ್‌ನಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ರಾಜ್ಯಕ್ಕೆ ವಾಪಾಸ್ಸಾಗುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇವರಿಗೆ ಪುಣೆಯಲ್ಲಿ ಹೃದಯಾಘಾತವಾಗಿದೆ. ಪುಣೆಯಲ್ಲೆ ಸಂಬಂಧಿಕರು, ಸ್ನೇಹಿತರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.


ಇವರು ಭಾನುವಾರ ಸ್ನೇಹಿತರ ಜತೆಗೆ ಪ್ರಯಾಗರಾಜ್‌ಗೆ ತೆರಳಿದ್ದರು.  ಯಾತ್ರೆ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜನಗರ: ಕಾಡು ಹಂದಿಗೆ ಹೊಂಚು ಹಾಕಿದ ಮೂವರು ಪೊಲೀಸರ ಅತಿಥಿ