Select Your Language

Notifications

webdunia
webdunia
webdunia
webdunia

ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿ ಮತ್ತೆ ಹಿಂದೂ ಧರ್ಮಕ್ಕೆ ಮತಾಂತರ

ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿ ಮತ್ತೆ ಹಿಂದೂ ಧರ್ಮಕ್ಕೆ ಮತಾಂತರ
ಹಿರೇಹಳ್ಳಿ , ಭಾನುವಾರ, 21 ಆಗಸ್ಟ್ 2022 (21:17 IST)
ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿಯೊಬ್ಬ ಮುಂಜಿಗೆ ಹೆದರಿ ಮರಳಿ ಹಿಂದೂ ಧರ್ಮಕ್ಕೆ ಬಂದಿರುವ ಘಟನೆ ತಾಲ್ಲೂಕಿನ ಹಿರೇಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಓಂಕಾರೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಎಚ್.ಆರ್.ಚಂದ್ರಶೇಖರಯ್ಯ ಅವರು ಮುಬಾರಕ್ ಪಾಷಾ ಎಂದು ಹೆಸರು ಬದಲಿಸಿಕೊಂಡು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಬಳಿಕ ಮುಂಜಿಗೆ ಹೆದರಿ ಮರಳಿ ಹಿಂದೂ ಧರ್ಮಕ್ಕೆ ಮಾಡಿದರು. ಸಕ್ಕರೆ ಕಾಯಿಲೆ ಇರುವುದರಿಂದ ಮುಂಜಿ ಮಾಡಿಸಿಕೊಳ್ಳಲು ಆಗುವುದಿಲ್ಲ. ಮುಂಜಿ ಮಾಡಿದರೆ ಮಾತ್ರ ಮುಸ್ಲಿಮರಲ್ಲಿ ಸರಿಯಾಗಿ ಶವ ಸಂಸ್ಕಾರ ಮಾಡುವುದು ಎಂದು ಚಂದ್ರಶೇಖರಯ್ಯ ತಿಳಿಸಿದರು..ಅರ್ಚಕ ಮತಾಂತರವಾಗಿರುವ ಸುದ್ದಿ ತಿಳಿದ ತಕ್ಷಣ ಮಾಜಿ ಸಚಿವ ಸೊಗಡು ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿ, ಮರಳಿ ಹಿಂದೂ ಧರ್ಮಕ್ಕೆ ಬರುವಂತೆ ಚಂದ್ರಶೇಖರಯ್ಯ ಅವರ ಮನವೊಲಿಸಲು ಯತ್ನಿಸಿದ್ದರು. ಸೊಗಡು ಶಿವಣ್ಣ ಅವರ ಮಾತಿಗೆ ಬೆಲೆಕೊಡುವುದರ ಜೊತೆಗೆ ಮುಂಜಿಗೆ ಅಂಜಿ ತಾನು ವಾಪಸ್ ಬಂದಿದ್ದೇನೆ ಎಂದು ಚಂದ್ರಶೇಖರ್ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬ್ರೆಡ್ ತರಲು ಹೋಗಿದ್ದ ಬಾಲಕ ನಾಪತ್ತೆ..!