Select Your Language

Notifications

webdunia
webdunia
webdunia
webdunia

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

Belgavi Crime Case

Sampriya

ಬೆಳಗಾವಿ , ಶನಿವಾರ, 18 ಅಕ್ಟೋಬರ್ 2025 (20:43 IST)
ಬೆಳಗಾವಿ: ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು, ಆಕೆಗೆ ವಿಚ್ಛೇದನ ನೀಡಿ ದೂರವಾಗಿದ್ದ ಪತ್ನಿಯನ್ನು ಆಕೆಯ ಮಾಜಿ ಪತಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ. 

ಮಾಜಿ ಪತ್ನಿಯನ್ನು ಕೊಂದು ಮನೆಯ ಹೊರಗಿನಿಂದ ಬೀಗ ಹಾಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. 

ಮೃತದೇಹ ಕೊಳೆತು ವಾಸನೆ ಬಂದಾಗ ಸ್ಥಳೀಯರಿಂದ ಪ್ರಕರಣ ಬೆಳಕಿಗೆ ಬಂದಿದೆ. ‌ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದು ಬಳಿಕ ಡೋರ್ ಲಾಕ್ ಮಾಡಿಕೊಂಡು ಹಂತಕ ಪರಾರಿಯಾಗಿದ್ದ ಎನ್ನಲಾಗಿದೆ. 

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ್ಮ‌ ನೆಲ್ಲಿಗಣಿ (34)ಎಂದು ಗುರುತಿಸಲಾಗಿದೆ. 

ಕಾಗವಾಡ ತಾಲೂಕಿನ ಬನಜವಾಡ ಗ್ರಾಮ ಸಂತೋಷ ಕಾಂಬಳೆ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. 

ಸವದತ್ತಿ ಕೆಎಸ್‌ಆರ್‌ಟಿಸಿ ಡಿಪೋ ವ್ಯಾಪ್ತಿಯಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡ್ತಿದ್ದ ಕಾಶಮ್ಮ ಪೊಲೀಸ್‌ ಇಲಾಖೆಯಲ್ಲಿ‌ ಕೆಲಸ ಮಾಡ್ತಿದ್ದ ಸಂತೋಷ ಪಾಟೀಲ್ ಇಬ್ಬರೂ ಸೇರಿ ಕಳೆದ 13 ವರ್ಷಗಳ ಹಿಂದೆಯೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 
ಜಾತಿ ಬೇರೆಯಾಗಿದ್ದರು, ಇಬ್ಬರು ಕುಟುಂಬದವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಮದುವೆಯಾಗಿ ಕೆಲವೇ ದಿನಗಳಲ್ಲಿ ಕಾಶಮ್ಮಳಿಗೆ ಪತಿ ಸಂತೋಷ ನಿರಂತರ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು ಗಂಡನ ಕಿರುಕುಳ ಹೆಚ್ಚಾದಂತೆ ಸವದತ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಾಶಮ್ಮ ವಾಸವಾಗಿದ್ದಳು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು