ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

Sampriya
ಶನಿವಾರ, 18 ಅಕ್ಟೋಬರ್ 2025 (20:43 IST)
ಬೆಳಗಾವಿ: ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು, ಆಕೆಗೆ ವಿಚ್ಛೇದನ ನೀಡಿ ದೂರವಾಗಿದ್ದ ಪತ್ನಿಯನ್ನು ಆಕೆಯ ಮಾಜಿ ಪತಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ. 

ಮಾಜಿ ಪತ್ನಿಯನ್ನು ಕೊಂದು ಮನೆಯ ಹೊರಗಿನಿಂದ ಬೀಗ ಹಾಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. 

ಮೃತದೇಹ ಕೊಳೆತು ವಾಸನೆ ಬಂದಾಗ ಸ್ಥಳೀಯರಿಂದ ಪ್ರಕರಣ ಬೆಳಕಿಗೆ ಬಂದಿದೆ. ‌ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದು ಬಳಿಕ ಡೋರ್ ಲಾಕ್ ಮಾಡಿಕೊಂಡು ಹಂತಕ ಪರಾರಿಯಾಗಿದ್ದ ಎನ್ನಲಾಗಿದೆ. 

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ್ಮ‌ ನೆಲ್ಲಿಗಣಿ (34)ಎಂದು ಗುರುತಿಸಲಾಗಿದೆ. 

ಕಾಗವಾಡ ತಾಲೂಕಿನ ಬನಜವಾಡ ಗ್ರಾಮ ಸಂತೋಷ ಕಾಂಬಳೆ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. 

ಸವದತ್ತಿ ಕೆಎಸ್‌ಆರ್‌ಟಿಸಿ ಡಿಪೋ ವ್ಯಾಪ್ತಿಯಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡ್ತಿದ್ದ ಕಾಶಮ್ಮ ಪೊಲೀಸ್‌ ಇಲಾಖೆಯಲ್ಲಿ‌ ಕೆಲಸ ಮಾಡ್ತಿದ್ದ ಸಂತೋಷ ಪಾಟೀಲ್ ಇಬ್ಬರೂ ಸೇರಿ ಕಳೆದ 13 ವರ್ಷಗಳ ಹಿಂದೆಯೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 
ಜಾತಿ ಬೇರೆಯಾಗಿದ್ದರು, ಇಬ್ಬರು ಕುಟುಂಬದವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಮದುವೆಯಾಗಿ ಕೆಲವೇ ದಿನಗಳಲ್ಲಿ ಕಾಶಮ್ಮಳಿಗೆ ಪತಿ ಸಂತೋಷ ನಿರಂತರ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು ಗಂಡನ ಕಿರುಕುಳ ಹೆಚ್ಚಾದಂತೆ ಸವದತ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಾಶಮ್ಮ ವಾಸವಾಗಿದ್ದಳು ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments