ಅಕ್ಕಿ ವಿಚಾರದಲ್ಲಿ ರಾಜಕೀಯ ನಿರ್ಧಾರ

Webdunia
ಗುರುವಾರ, 15 ಜೂನ್ 2023 (18:30 IST)
ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು ಎಂದುಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದೆ. ಜುಲೈ 1ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್​ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಮುಂದಿನ ಸುದ್ದಿ
Show comments