Select Your Language

Notifications

webdunia
webdunia
webdunia
Tuesday, 8 April 2025
webdunia

ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ

ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ
davanagere , ಭಾನುವಾರ, 17 ಅಕ್ಟೋಬರ್ 2021 (16:49 IST)
ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು. ನಮ್ಮಲ್ಲಿ ಅಸಮಾಧಾನವಿಲ್ಲ ಎಂದು ಹೇಳಿದರು.
 
ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ನನ್ನ ಹಾಗೂ ಸೋಮಣ್ಣ ನಡುವೆ ಯಾವುದೇ ಭಿನ್ನಾಭಿಪ್ರಾಯಗಳೂ ಇಲ್ಲ.
ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿಯೂ ಯಾವುದೇ ಅಸಮಾಧಾನಗಳಿಲ್ಲ ಎಂದು ಹೇಳಿದರು.
 
ಸದ್ಯ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದೇನೆ. ಜನರ ಸಂಕಷ್ಟಗಳನ್ನು ಆಲಿಸುತ್ತಿದ್ದೇನೆ. ಜನರು ಸ್ಮಶಾನ ಭೂಮಿಗೆ ಜಾಗವಿಲ್ಲದಿರುವ ಬಗ್ಗೆ ಮಾತನಾಡಿದ್ದಾರೆ. ಈ ಭಾಗದಲ್ಲಿ ಸರ್ಕಾರಿ ಜಮೀನು ಇಲ್ಲದಿರುವ ಕಾರಣಕ್ಕೆ ಯಾರಾದರೂ ಜಮೀನು ಕೊಟ್ಟರೆ ಹಣ ಕೊಡುವುದಾಗಿ ರೈತರಿಗೆ ಮನವಿ ಮಾಡಿದ್ದೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಈ ತಿಂಗಳು ವಾಡಿಕೆಗಿಂತಲೂ ಹೆಚ್ಚು ಮಳೆ