Select Your Language

Notifications

webdunia
webdunia
webdunia
webdunia

ಅತ್ಯಾಚಾರವೆಸಗಿದ ಯುವಕನನ್ನು ಬಂಧಿಸುವಂತೆ ಒತ್ತಾಯಿಸಿ ವಿಷಸೇವಿಸಿದ ಯುವತಿ

ಅತ್ಯಾಚಾರವೆಸಗಿದ ಯುವಕನನ್ನು ಬಂಧಿಸುವಂತೆ ಒತ್ತಾಯಿಸಿ ವಿಷಸೇವಿಸಿದ ಯುವತಿ
ಬೆಳಗಾವಿ , ಶನಿವಾರ, 24 ಜೂನ್ 2017 (17:23 IST)
ಅತ್ಯಾಚಾರವೆಸಗಿದ ಯುವಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಯುವತಿಯೊಬ್ಬಳು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ವರದಿಯಾಗಿದೆ.
 
ಯುವತಿಯೊಬ್ಬಳು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ, ವಿಷ ಸೇವಿಸಿ ಆರೋಪಿ ಸಂಜಯ್ ಕಾಟಿಕರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾಳೆ.
 
ಆರೋಪಿ ಸಂಜಯ್ ಕಾಟಿಕರ್ ತನ್ನ ಮೇಲೆ ಅತ್ಯಾಚಾರವೆಸಗಿ, ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ನಿರಂತರವಾಗಿ ಜೀವ ಬೆದರಿಕೆಯೊಡ್ಡುತ್ತಿದ್ದಾನೆ. ಇದರಿಂದ ಬೇಸತ್ತು ವಿಷ ಸೇವಿಸಿರುವುದಾಗಿ ಯುವತಿ ಹೇಳಿದ್ದಾಳೆ.
 
ಆರೋಪಿ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಯುವತಿ, ಅತ್ಯಾಚಾರದ ದೂರು ದಾಖಲಿಸಿದ ನಂತರ ಜೀವ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಆರೋಪಿಯ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.
 
ವಿಷ ಸೇವಿಸಿದ ಯುವತಿಯನ್ನು ಬೆಳಗಾವಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಸಾಲ ಮನ್ನಾ ಸಂಬಂಧ ಯಾವುದೇ ಷರತ್ತು ವಿಧಿಸಿಲ್ಲ: ಸಿಎಂ ಸ್ಪಷ್ಟನೆ