Select Your Language

Notifications

webdunia
webdunia
webdunia
webdunia

ಎ.ರವಿ ಬೆಂ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನ ಪ್ರಾಧಿಕಾರದ ಅಧ್ಯಕ್ಷ

ಎ.ರವಿ ಬೆಂ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನ ಪ್ರಾಧಿಕಾರದ ಅಧ್ಯಕ್ಷ
bangalore , ಗುರುವಾರ, 11 ನವೆಂಬರ್ 2021 (20:37 IST)
ಬೆಂಗಳೂರು: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕಂದಾಯ ಸಚಿವ ಆರ್.ಅಶೋಕ್ ಸಂಬಂಧಿ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರರ ಆರೋಪವೇನಿತ್ತು?: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಸಚಿವ ಆರ್. ಅಶೋಕ್ ಸಂಬಂಧಿಯಾದ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ. ರವಿ ಕೇವಲ ಪಿಯುವರೆಗೆ ಓದಿದ್ದು, ಪದವಿ ಕೂಡ ಪೂರೈಸಿಲ್ಲ. ಹಾಗಿದ್ದೂ, ಸಿಎಂ ಮತ್ತು ಅಶೋಕ್ ಅವರ ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಆಟೋ ರಿಕ್ಷಾಗಳಿಗೆ ಬಳಸುವ ಎಲ್ ಪಿ ಜಿ ಬೆಲೆ ಕಳೆದ ಒಂದು ವರ್ಷದಲ್ಲಿ ಎರಡುಪಟ್ಟು ಏರಿಕೆ