Select Your Language

Notifications

webdunia
webdunia
webdunia
webdunia

ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಭೆ ನಡೆಸಬೇಕೆಂದು ಸರ್ಕಾರಕ್ಕೆ ಮನವಿ

ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಭೆ ನಡೆಸಬೇಕೆಂದು ಸರ್ಕಾರಕ್ಕೆ ಮನವಿ
bangalore , ಗುರುವಾರ, 22 ಡಿಸೆಂಬರ್ 2022 (18:48 IST)
ಚೀನಾ, ಜಪಾನ್, ಕೊರಿಯಾ, ಅಮೆರಿಕ, ಬ್ರೆಜಿಲ್ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಮುಂದಾಗಿದ್ದು ಈ ಬಗ್ಗೆ ಇಂದು ಸಭೆ ನಡೆಸಿ ಚರ್ಚಿಸಲಿದ್ದಾರೆ. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಮನೆ ಮಾಡಿದ್ದು, ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಕೊರೊನಾ ಅಡ್ಡಿಪಡಿಸಬಹುದಾ ಎಂಬ ಗೊಂದಲ ಉಂಟಾಗಿದೆ. ಸದ್ಯ ರಾಜ್ಯದಲ್ಲಿ ಮತ್ತೆ ಕೋವಿಡ್ ಹೆಚ್ಚಳ ಭೀತಿ ಹಿನ್ನೆಲೆ ಹೊಸ ವರ್ಷದ ಸಂಭ್ರಮಾಚರಣೆಗೆ ಯಾವುದೇ ಅಡ್ಡಿ ಪಡಿಸದಂತೆ ಹೋಟೆಲ್ ಅಸೋಸಿಯೇಷನ್ನಿಂದ ಮನವಿ ಮಾಡಲಾಗಿದೆ. ಈ ಕುರಿತಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಅವರು ಮಾತನಾಡಿ, ಕಳೆದ 2 ವರ್ಷದಲ್ಲಿ ಕೊರೊನಾ ಸಂಕಷ್ಟದಿಂದ ಹೊಸ ವರ್ಷದ ಆಚರಣೆ ಮಾಡಿಲ್ಲ. ಹೀಗಾಗಿ ಉದ್ಯಮ‌ ಪೂರ್ತಿ ನೆಲಕಚ್ಚಿತ್ತು. ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹೋಟೆಲ್ ಸಂಘದ ಜೊತೆ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಡಿ. 29ರಂದು ಆಟೋ ಚಾಲಕರಿಂದ ಬೃಹತ್ ಪ್ರತಿಭಟನೆ