Publish Date: Tue, 10 Oct 2017 (15:41 IST)
Updated Date: Tue, 10 Oct 2017 (15:43 IST)
ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಅಪಹರಿಸಿದ ಅಪ್ರಾಪ್ತ ಬಾಲಕ, ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದನು. ನಂತರ ಆರೋಪಿಯನ್ನು ಬಂಧಿಸಲಾಗಿದ್ದು ಆತನ ಕೃತ್ಯಕ್ಕೆ ಸಹಕರಿಸಿದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯಲ್ಲಿ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದು ಅವರ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಸಕಲೇಶಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.