Publish Date: Tue, 27 Jul 2021 (21:00 IST)
Updated Date: Tue, 27 Jul 2021 (21:05 IST)
ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಿದ ಬೆನ್ನಲ್ಲೇ ಮೂವರು ಡಿಸಿಎಂಗಳನ್ನೂ ಕೂಡ ಆಯ್ಕೆ ಮಾಡಲಾಗಿದೆ.
ಸಚಿವರಾದ ಆರ್.ಅಶೋಕ್, ಶ್ರೀರಾಮುಲು ಹಾಗೂ ಗೋವಿಂದ್ ಕಾರುಜೋಳ ಅವರನ್ನ ಉಪಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಲಾಗಿದೆ. ಅದರಂತೆ ನಾಳೆ ಮಧ್ಯಾಹ್ನ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮೂವರು ಡಿಸಿಎಂಗಳು ಕೂಡ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.