ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

Sampriya
ಶನಿವಾರ, 30 ಆಗಸ್ಟ್ 2025 (21:41 IST)
Photo Credit X
ಬೆಂಗಳೂರು: ಹಿರಿಯ ನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಅಭಿಮಾನ್‌ ಸ್ಟುಡಿಯೊ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದೆ. ಹೀಗಾಗಿ, ಜಮೀನನ್ನು ವಶಕ್ಕೆ ಪಡೆದು ಸಸ್ಯೋದ್ಯಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. 

ನಟ ವಿಷ್ಣುವರ್ಧನ್‌ ಅವರ ಸಮಾಧಿ ತೆರವಿನಿಂದ ವಿವಾದಕ್ಕೆ ಗುರಿಯಾಗಿದ್ದ ಕೆಂಗೇರಿಯ ಅರಣ್ಯ ಭೂಮಿ ಅರಣ್ಯ ಇಲಾಖೆಗೆ ಮರಳಿ ಬಂದರೆ ಅಲ್ಲಿ ಒಂದು ಸಸ್ಯೋದ್ಯಾನ ನಿರ್ಮಿಸಲಾಗುವುದು. ಬೆಂಗಳೂರು ವ್ಯಾಪಕವಾಗಿ ಬೆಳೆದಿದ್ದು, ಶ್ವಾಸತಾಣಗಳ ಅಗತ್ಯವಿದೆ ಎಂದರು. 

1980ರ ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಈ ಅರಣ್ಯ ಭೂಮಿಯ ಪೈಕಿ 20 ಎಕರೆ ಪ್ರದೇಶವನ್ನು ಸ್ಟುಡಿಯೊ ನಿರ್ಮಿಸುವ ಸಲುವಾಗಿ ಟಿ.ಎನ್.ಬಾಲಕೃಷ್ಣ ಅವರಿಗೆ 1969ರಲ್ಲಿ ಒಂದು ಎಕರೆಗೆ ₹300ರಂತೆ ಒಟ್ಟು ₹6 ಸಾವಿರದಂತೆ 20 ಎಕರೆ ಪ್ರದೇಶವನ್ನು ಷರತ್ತುಬದ್ಧವಾಗಿ ಮಂಜೂರು ಮಾಡಲಾಗಿತ್ತು 

22 ವರ್ಷಗಳ ಹಿಂದೆ ಆ ಜಮೀನಿನಲ್ಲಿ 10 ಎಕರೆ ಪ್ರದೇಶವನ್ನು ಬಾಲಕೃಷ್ಣ ಅವರ ಮಕ್ಕಳು ಸರ್ಕಾರದಿಂದ ಪೂರ್ವಾನುಮತಿ ಪಡೆದು ಮಾರಾಟ ಮಾಡಿದ್ದಾರೆ. ಮಾರಾಟದಿಂದ ಬಂದ ಹಣದಿಂದ ಸ್ಟುಡಿಯೊ ಅಭಿವೃದ್ಧಿಪಡಿಸಬೇಕೆಂದು ಷರತ್ತು ಹಾಕಲಾಗಿತ್ತು. ಆದರೆ, ಈವರೆಗೆ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಹೇಳಿದರು.

ಉಳಿದ 10 ಎಕರೆ ಜಮೀನನ್ನೂ ಮಾರಾಟ ಮಾಡಲು ಮುಂದಾಗಿರುವುದು ಷರತ್ತಿನ ಉಲ್ಲಂಘನೆಯಾಗಿದೆ. ಈ ಅರಣ್ಯ ಭೂಮಿಯನ್ನು ಇಲಾಖೆಗೆ ಮರಳಿಸುವಂತೆ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ವಿಷ್ಣುವರ್ಧನ್ ಸ್ಮಾರಕ ಕುರಿತಂತೆ ಈಶ್ವರ ಖಂಡ್ರೆ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ವಿಷ್ಣುವರ್ಧನ್ ಸ್ಮಾರಕಕ್ಕೆ ಜಮೀನು ನೀಡಲಾಗುವುದೇ ಎಂಬ ಪ್ರಶ್ನೆಗೆ, ಈ ಬಗ್ಗೆ ಸರ್ಕಾರ ನಿಯಮಾನುಸಾರ ತೀರ್ಮಾನಿಸಲಿದೆ ಎಂದು ಸಚಿವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಮುಂದಿನ ಸುದ್ದಿ
Show comments