ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳ ಹಿಂದೆ ಜೈಲು ಪಾಲಾಗಿದ್ದ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನನ್ನು ಮಂಜೂರು ಮಾಡಲಾಗುದೆ.
ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆಅರ್ಜಿ ಸಲ್ಲಿಸಿದ್ದ. ಇದೀಗ ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್ ಅರ್ಜಿಯನ್ನು ಪುರಸ್ಕರಿಸಿ, ಜಾಮೀನು ಮಂಜೂರು ಮಾಡಿದೆ. ಇದರಿಂದ ಚಿನ್ನಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.
ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.
1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.