Daily Horoscope
✕

ಮಹೇಶ್ ಶೆಟ್ಟಿ ದಕ ಜಿಲ್ಲೆಯಿಂದ ಗಡಿಪಾರು ಆದೇಶದಲ್ಲಿ ಮಹತ್ವದ ಬೆಳವಣಿಗೆ

Sampriya
ಮಂಗಳವಾರ, 30 ಸೆಪ್ಟಂಬರ್ 2025 (14:23 IST)
ಮಂಗಳೂರು:  ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ್ದು, ವಿಚಾರಣೆಯನ್ನು ಅ.8ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ.

ಮಹೇಶ್ ಅವರು ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸದರು. ಅದರ ವಿಚಾರಣೆ ನಡೆಸಿದ ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು, ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ. 

ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ಪೆಕ್ಟರ್ ಪ್ರತಿವಾದಿಯಾಗಿಸಿದ್ದರು. ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು. 

ಸೆ.18 ರಂದು ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದರು. 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. 

ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿತ್ತು. ಆದೇಶ ಪಾಲನೆ ಮಾಡದೇ ಇದ್ದಲ್ಲಿ ಬಂಧಿಸಿ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಸೂಚನೆ ನೀಡಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನನ್ನು ಓಡಿಸಲು ಬಂದ ಯುವಕನನ್ನು ಕಾಲಲ್ಲಿ ಹಾಕಿ ತುಳಿದ ಕಾಡಾನೆ: ಭೀಕರ ವಿಡಿಯೋ ಇಲ್ಲಿದೆ ನೋಡಿ

ಎಸಿ ರೈಲು ಬೋಗಿಯೊಳಗೆ ದೀಪ ಹಚ್ಚಿ ಪೂಜೆ, ಶಂಖನಾದ ಮಾಡಿದ ವ್ಯಕ್ತಿ: ವೈರಲ್ ಆಯ್ತು Video

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿದ ಕಾಂಗ್ರೆಸ್ ಇಂದು ಸಂವಿಧಾನದ ರಕ್ಷಕ ಎಂದು ಬಿಂಬಿಸಿಕೊಳ್ಳುತ್ತಿದೆ: ವಿಜಯೇಂದ್ರ

ಆಭರಣ ಪ್ರಿಯರಿಗೆ ಶಾಕ್: ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಚಿನ್ನದ ದರ ಎಷ್ಟಾಗಿದೆ ಗೊತ್ತಾ

ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡ್ತೀನಿ, ಬಿಜೆಪಿಯವರು ಯಾಕೆ ಕೇಂದ್ರದಿಂದ ಹಣ ಕೇಳಲ್ಲ: ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments