Daily Horoscope
✕

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Sampriya
ಮಂಗಳವಾರ, 28 ಅಕ್ಟೋಬರ್ 2025 (18:25 IST)
Photo Credit X
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಎಸ್‌ಐಟಿ ವಿಚಾರಣೆಗೆ 7 ದಿನಗಳೊಳಗೆ ಹಾಜರಗಬೇಕೆಂದು ನಾಲ್ಕು ಮಂದಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.

ಧರ್ಮಸ್ಥಳ ಸುತ್ತಮುತ್ತಲಿನ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಅದರಂತೆ ಸುಜಾತ ಭಟ್ ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಮಧ್ಯಾಹ್ನ ಬಂದ ನಾಲ್ಕು ಮಂದಿಯ ಪರ ವಕೀಲರಾದ ಅಂಬಿಕಾ ಪ್ರಭು ಎಸ್.ಐ.ಟಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಇದೀಗ ಅದರಂತೆ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದು, ಉಳಿದಂತೆ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡರಿಗೆ ನಾಲ್ಕು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲಾಗಿದೆ ಎಂದು ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments