Select Your Language

Notifications

webdunia
webdunia
webdunia
webdunia

ಹೆಂಡತಿ ಮಕ್ಕಳಿಗೆ ಕೊಳ್ಳಿಯಿಟ್ಟ ಪಾಪಿ ಪತಿ

A sinful husband who cheated his wife and children
tumakuru , ಬುಧವಾರ, 15 ಮಾರ್ಚ್ 2023 (17:06 IST)
ಕಿರಾತಕ ಪತಿಯೋರ್ವ ಹೆಂಡತಿ ಹಾಗೂ ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೋ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿದೆ. ಹೆಂಡತಿ ಶಾಂತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಕ್ಕಳಾದ ಅಕ್ಷಯ, ಅಕ್ಷಿತಾ, ಅಮೃತಾ ಮೂವರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಮೂವರು ಮಕ್ಕಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯ್ತು.. ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರು ಮಕ್ಕಳನ್ನು ಬೆಂಗಳೂರಿಗೆ ರವಾನಿಸಲಾಗಿದೆ. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಅನುಮಾನಗೊಂಡ ಪತಿ ರಾಮಾಂಜಿ ಸಿಟ್ಟಿಗೆದ್ದು, ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ರೂಮ್‌ಗೆ ಬೀಗ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಬೆಂಕಿಹಚ್ಚಿ ಪರಾರಿಯಾಗಿದ್ದ ರಾಮಾಂಜಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಮಾತನಾಡುತ್ತಲೇ ಹಾರಿ ಹೋಯ್ತು ಪ್ರಾಣ