ಬೆಂಗಳೂರು-ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ವಿಚಾರಕ್ಕೆ ಹೋರಾಟದ ವಿಚಾರವಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಐದು ಜನ ಇನ್ಸ್ಪೆಕ್ಟರ್ ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಮಾಡಿದ್ದು,ಸ್ಥಳಕ್ಕೆ ಬಿಜೆಪಿ ಪ್ರತಿಭಟನಾಕಾರರು ಆಗಮಿಸಿ ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪ್ರತಿಭಟನಾಕಾರರನ್ನ ಪೊಲೀಸರು ಬಂಧಿಸಿದ್ದಾರೆ.ಪ್ರತಿಭಟನೆಗೆ ಅವಕಾಶ ಇಲ್ಲಾ ಎಂದು ಅರೆಸ್ಟ್ ಮಾಡಿದ್ದಾರೆ.ಪೊಲೀಸರ ನಡೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಶಾಸಕ ಸಿಕೆ ರಾಮಮೂರ್ತಿ ಸೇರಿ ಎಲ್ಲಾ ಬಿಜೆಪಿ ನಾಯಕರನ್ನ ಪೊಲೀಸರು ಬಂಧಿಸಿದ್ದಾರೆ.