ಮಹಿಳೆಯೊಂದಿಗೆ ಸೈನಿಕನ ಅಸಭ್ಯವರ್ತನೆ

Webdunia
ಸೋಮವಾರ, 18 ಜುಲೈ 2022 (17:50 IST)
ಸಹದ್ಯೋಗಿ ಮಹಿಳೆಯೊಂದಿಗೆ ಮಾಜಿ ಸೈನಿಕನೊಬ್ಬ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪ ಶನಿವಾರ ಸಂಜೆ ಸಂಭವಿಸಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಕಾವು ಎಂಬಲ್ಲಿರುವ ಕ್ಯಾಂಪ್ಕೋ ಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ನೀಡಿರುವ ದೂರಿನಂತೆ ಅದೇ ಕ್ಯಾಂಪ್ಕೋ ಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿರುವ, ಮಾಜಿ ಸೈನಿಕನಾಗಿರುವ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಕುರಿಕ್ಕಾರ ರಸ್ತೆ ನಿವಾಸಿ ವಿದೀಪ್​ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪದ ಮೇಲೆ ಮಾಜಿ ಸೈನಿಕ ಬಂಧನಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪದ ಮೇಲೆ ಮಾಜಿ ಸೈನಿಕ ಬಂಧನಸಹದ್ಯೋಗಿಯಾಗಿದ್ದರೂ ಆತ ನನ್ನೊಂದಿಗೆ ವರ್ತಿಸುತ್ತಿದ್ದ ರೀತಿ ನನಗೆ ಇಷ್ಟವಾಗದ ಕಾರಣ ಆತನೊಂದಿಗೆ ತಾನು ಹೆಚ್ಚು ಮಾತನಾಡುತ್ತಿರಲಿಲ್ಲ. 
 
ಕಳೆದ 4 ದಿನಗಳಿಂದ ಸಂಸ್ಥೆಗೆ ಕೆಲಸಕ್ಕೆ ಬರದಿರುವ ಆತ ಶನಿವಾರ ಸಂಜೆ ನಾನು ಕೆಲಸ ಮುಗಿಸಿಕೊಂಡು ತಿಂಗಳಾಡಿ ತನಕ ಬಸ್​​​​ನಲ್ಲಿ ತೆರಳಿ ಅಲ್ಲಿಂದ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ತಿಂಗಳಾಡಿ ಕಡೆಯಿಂದ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಕೆದಂಬಾಡಿ ಗ್ರಾಮದ ದರ್ಬ ಎಂಬಲ್ಲಿ ಬೈಕ್ ನಿಲ್ಲಿಸಿ, ಬಳಿಗೆ ಬಂದು ನನ್ನನ್ನು ಮುಂದಕ್ಕೆ ಹೋಗದಂತೆ ತಡೆದು ನಿಲ್ಲಿಸಿ ಅಸಭ್ಯವಾಗಿ ವರ್ತಿಸಿದ್ದಾನೆ.
 
ಇದೇ ಸಮಯ ಸ್ಥಳಕ್ಕೆ ಜನರು ಬರುವುದನ್ನು ನೋಡಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆ ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ಭಾನುವಾರ ಆರೋಪಿ ವಿದೀಪ್ ಕುಮಾರ್​​ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments