Publish Date: Mon, 13 Mar 2023 (10:04 IST)
Updated Date: Mon, 13 Mar 2023 (10:29 IST)
ಬೆಂಗಳೂರು : ಸಿಲಿಕಾನ್ ಸಿಟಿಯ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ.