Select Your Language

Notifications

webdunia
webdunia
webdunia
webdunia

ರೇಬೀಸ್ ರೋಗಕ್ಕೆ ರಾಜ್ಯಾದಂತ ಉಚಿತ ಲಸಿಕೆ: ಸಚಿವ ಪ್ರಭು ಚವ್ಹಾಣ್

ರೇಬೀಸ್ ರೋಗಕ್ಕೆ ರಾಜ್ಯಾದಂತ ಉಚಿತ ಲಸಿಕೆ: ಸಚಿವ ಪ್ರಭು ಚವ್ಹಾಣ್
bangalore , ಮಂಗಳವಾರ, 28 ಸೆಪ್ಟಂಬರ್ 2021 (17:05 IST)
ಬೆಂಗಳೂರು: ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತವಾಗಿ ನಾಯಿಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ವಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಜಾಗತಿಕವಾಗಿ ರೇಬೀಸ್ ರೋಗದ ನಿರ್ಮೂಲನೆಗಾಗಿ ಮತ್ತು ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ರೇಬೀಸ್ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಉಚಿತ ಲಸಿಕೆ ಹಾಕುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಚೌಹಾಣ್ ಹೇಳಿದ್ದಾರೆ.
 
ಬೀದರ್ ಜಿಲ್ಲೆಯ ಪಾಲಿಕ್ಲಿನಿಕ್ ನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದೇನೆ. ಸೆಪ್ಟೆಂಬರ್ 28 ರಿಂದ 30ರ ವರೆಗೆ 3 ದಿನಗಳ ಕಾಲ ಉಚಿತ ಲಸಿಕೆ ನೀಡಲಾಗುತ್ತದೆ. ಮನೆಯಲ್ಲಿನ ಮುದ್ದು ಪ್ರಾಣಿಗಳು ಎಂದು ಪರಿಗಣಿಸ್ಪಡುವ ನಾಯಿಗಳ ಆರೋಗ್ಯದ ದೃಷ್ಟಿಯಿಂದ ನಿಮ್ಮ ಹತ್ತಿರದ ಪಶು ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 
 
ಪಶುವೈದ್ಯಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
rabis

Share this Story:

Follow Webdunia kannada

ಮುಂದಿನ ಸುದ್ದಿ

ವಿಭಿನ್ನ ಗುಣದ 35 ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ ಮೋದಿ