Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ

ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ
ಬೆಂಗಳೂರು , ಶುಕ್ರವಾರ, 21 ಫೆಬ್ರವರಿ 2020 (09:33 IST)
ಬೆಂಗಳೂರು : ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಅಮೂಲ್ಯ ಘೋಷಣೆ ಕೂಗಿದ ಕೇಸ್ ಕ್ಕೆ ಸಂಬಂಧಪಟ್ಟಂತೆ ಆರೋಪಿ ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಅಮೂಲ್ಯ ಎಂಬ ಯುವತಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಿ  14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಪ್ಪ ತಾಲೂಕಿನ ಶಿವಪುರ ಗ್ರಾಮದಲ್ಲಿರುವ ಅಮೂಲ್ಯ ಮನೆ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಅಮೂಲ್ಯ ತಂದೆ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 447, 427, 504, 506 ರಡಿ ಪ್ರಕರಣ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿ