ಲೋನ್ ಆ್ಯಪ್ ಕಿರುಕುಳಕ್ಕೆ ವಿದ್ಯಾರ್ಥಿಯೊರ್ವ ಬಲಿಯಾಗಿದ್ದಾನೆ. ಲೋನ್ ಕಟ್ಟದ್ದಕ್ಕೆ ಟಾರ್ಚರ್ ಕೊಟ್ಟಿದ್ರಿಂದ 22ವರ್ಷದ ಇಂಜಿನಿಯರಿಂಗ್ ವಿಧ್ಯಾರ್ಥಿ ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ನೇಹಿತನಿಗಾಗಿ ಆನ್ಲೈನ್ ತೇಜಸ್ ಆನ್ ಲೈನ್ ಮೂಲಕ ಲೋನ್ ಪಡಿದಿದ್ದ. ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಆರನೇ ಸೆಮಿಸ್ಟಾರ್ ಓದುತ್ತಿದ್ದು,ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ತೇಜಸ್ ಕಾಲೇಜಿಗೆ ಟಾಪರ್ ಆಗಿದ್ದ.ಸ್ನೇಹಿತ ಮಹೇಶ್ ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ.ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆ ಲೋನ್ ಆ್ಯಪ್ ಗಳು ವಿಪರೀತ ಟಾರ್ಚರ್ ನೀಡಿದ್ರು. ಟಾರ್ಚರ್ ತಾಳಲಾರದೆ ನಿನ್ನೆ ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸಂಜೆ ಆರು ಗಂಟೆ ಸುಮಾರಿಗೆ ತಾಯಿಯ ವೇಲ್ ನಿಂದ ನೇಣು ಬಿಗಿದುಕೊಂಡು ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು.ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ.. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ.. ನಾನು ಮಾಡಿರುವ ಸಾಲ ತೀರಿಸಲು ಆಗೋದಿಲ್ಲ ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ ..ಥ್ಯಾಂಕ್ಸ್ ಗುಡ್ ಬಾಯ್ಅಂತ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ