Publish Date: Mon, 19 Nov 2018 (07:11 IST)
Updated Date: Mon, 19 Nov 2018 (07:13 IST)
ಮುಂಬೈ : ಮಹಿಳಾ ಪೇದೆ ಮೇಲೆ ಅದೇ ಠಾಣೆಯ ಸಬ್ ಇನ್ಸ್ಪೆಕ್ಟರ್ ಅತ್ಯಾಚಾರ ಎಸಗಿದ ಘಟನೆ ಮುಂಬೈ ನಲ್ಲಿ ನಡೆದಿದೆ.
ಆರೋಪಿಯನ್ನು ಎಸ್ ಐ ಅಮಿತ್ ಶೇಲರ್ ಎಂದು ಗುರುತಿಸಲಾಗಿದ್ದು, ಈತ ಕಳೆದ ಮಾರ್ಚ್‍ನಲ್ಲಿ ತನ್ನ ಜೊತೆ ಕೆಲಸ ಮಾಡುತ್ತಿದ್ದ ಮಹಿಳಾ ಪೇದೆಗೆ ಮತ್ತು ಬರುವ ತಂಪು ಪಾನೀಯ ಕುಡಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆ ದೃಶ್ಯಾವಳಿಯನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.
ಈ ಬಗ್ಗೆ ಸಂತ್ರಸ್ತೆ ಮುಂಬೈನ ಕ್ರೈಂ ಬ್ರಾಂಚ್‍ನಲ್ಲಿ ದೂರು ನೀಡಿದ್ದಾರೆ. ಸದ್ಯಕ್ಕೆ ಪೇದೆ ನೀಡಿದ ದೂರಿನ ಆಧಾರದ ಮೇರೆಗೆ ಶೇಲರ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.