Webdunia - Bharat's app for daily news and videos

Install App

ತರಗತಿಯಲ್ಲಿ ಫೇಲ್ ಮಾಡುವುದಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ

Sampriya
ಬುಧವಾರ, 14 ಆಗಸ್ಟ್ 2024 (16:43 IST)
Photo Courtesy X
ಗುಜರಾತ್: ಅಪ್ರಾಪ್ತ ವಿದ್ಯಾರ್ಥಿನಿಗೆ ತರಗತಿಯಲ್ಲಿ ಫೇಲ್ ಮಾಡುವುದಾಗಿ ಬೆದರಿಸಿ ಆಕೆಯ ಮೇಲೆ ಶಿಕ್ಷಕನೊಬ್ಬ ನಿರಂತರ ಅತ್ಯಾಚಾರ ಎಸಗಿದ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಪೋಕ್ಸೋ ನ್ಯಾಯಲವು ಇದೀಗ ಆರೋಪಿ ಶಿಕ್ಷಕನಿಗೆ, 11 ಸಾವಿರ ದಂಡ ಹಾಗೂ 25ವರ್ಷ ಜೈಲು ಶಿಕ್ಷೆ ವಿಧಿಸಿದೆ. ದರ್ಶನ್ ಸುತಾರ್ ಎಂಬಾತ10ನೇ ತರಗತಿಯ ಕಂಪ್ಯೂಟರ್ ಬೋರ್ಡ್ ಪರೀಕ್ಷೆಯಲ್ಲಿ 14 ವರ್ಷದ ವಿದ್ಯಾರ್ಥಿನಿಗೆ ಹೆಚ್ಚಿನ ಅಂಕಗಳ ಭರವಸೆ ಹಾಗೂ ಫೈಲ್ ಮಾಡುವುದಾಗಿ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಗುಜರಾತಿನ ಆನಂದ್‌ನ ವಿಶೇಷ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯವು ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಪದೇ ಪದೇ ಅತ್ಯಾಚಾರ, ಪರೀಕ್ಷೆಯಲ್ಲಿ ಫೇಲ್ ಮತ್ತು ದೌರ್ಜನ್ಯವನ್ನು ಬಹಿರಂಗಪಡಿಸಿದರೆ ಅವಳ ಕುಟುಂಬಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ ಶಿಕ್ಷಕನಿಗೆ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

11,000 ದಂಡ ವಿಧಿಸಿ, ಸಂತ್ರಸ್ತೆಗೆ 4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಗುಜರಾತ್‌ನ ಆನಂದ್‌ನ ಬಕ್ರೋಲ್‌ನ ನಿವಾಸಿ ದರ್ಶನ್ ಸುತಾರ್ 2022 ರಲ್ಲಿ ವಿದ್ಯಾನಗರದ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಉದ್ಯೋಗದಲ್ಲಿದ್ದರು. ಈ ಸಮಯದಲ್ಲಿ 14 ವರ್ಷದ ವಿದ್ಯಾರ್ಥಿನಿಯನ್ನು 10 ನೇ ತರಗತಿಯ ಕಂಪ್ಯೂಟರ್ ಬೋರ್ಡ್ ಪರೀಕ್ಷೆಯಲ್ಲಿ ಹೆಚ್ಚಿನ ಆಂತರಿಕ ಅಂಕಗಳನ್ನು ನೀಡುವುದಾಗಿ ಭರವಸೆ ನೀಡಿ ಶೋಷಿಸಿದ್ದಾನೆ.

ಅತ್ಯಾಚಾರ ಎಸಗಿ ಯಾರಿಗಾದರೂ ಹೇಳಿದರೆ ಕುಟುಂಬದ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆಯ ತಾಯಿ ಅನುಮಾನಗೊಂಡು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಸುತಾರ್‌ನನ್ನು ಪೋಕ್ಸೋ ಕಾಯ್ದೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ