Select Your Language

Notifications

webdunia
webdunia
webdunia
webdunia

ಕ್ಷುಲ್ಲಕ ಕಾರಣಕ್ಕೆ ಮಕ್ಕಳನ್ನು ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ

ಕ್ಷುಲ್ಲಕ ಕಾರಣಕ್ಕೆ ಮಕ್ಕಳನ್ನು ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ
ಹಾವೇರಿ , ಶನಿವಾರ, 26 ಅಕ್ಟೋಬರ್ 2019 (19:36 IST)
ಪಾಠ ಮಾಡಬೇಕಿದ್ದ ಶಿಕ್ಷಕನೊಬ್ಬ ತನ್ನ ಶಾಲಾ ಮಕ್ಕಳನ್ನೇ ಹಿಗ್ಗಾ ಮುಗ್ಗಾ ಥಳಿಸಿರೋ ಘಟನೆ ನಡೆದಿದೆ.

ಹಾವೇರಿಯ ಹನುಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಲೆಯ 8 ವಿದ್ಯಾರ್ಥಿಗಳನ್ನು ಶಿಕ್ಷಕ ಕುಮಾರಸ್ವಾಮಿ ಹಿರೇಮಠ ಬಾಸುಂಡೆ ಬರೋವಂತೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಶಿಕ್ಷಕ ಕುಮಾರಸ್ವಾಮಿ ಹಿರೇಮಠ ತನ್ನ 500 ರೂ.ಗಳನ್ನು ಕಳೆದುಕೊಂಡಿದ್ದಾನೆ. ಆದರೆ ಅದನ್ನು ಮಕ್ಕಳೇ ಕದ್ದಿರಬಹುದು ಎಂದು ಸಂಶಯ ವ್ಯಕ್ತಪಡಿಸಿ ಕೋಣೆಯೊಂದರಲ್ಲಿ ಮಕ್ಕಳಿಗೆ ಥಳಿಸಿದ್ದಾನೆ.

ಶಿಕ್ಷಕನ ವಿರುದ್ಧ ಪಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನೌಕರಿ ಕೊಡಿಸುವುದಾಗಿ ನಂಬಿಸಿ ಭಾರಿ ಮೋಸ